ಕರ್ನಾಟಕ ಲೋಕ ಸೇವಾ ಆಯೋಗದಿಂದ 31-07-2020 ರಲ್ಲಿ ಅಧಿಸೂಚಿಸಲಾದ ಗ್ರೂಪ್ 'ಸಿ' ತಾಂತ್ರಿಕೇತರ ವೃಂದದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಹೈದ್ರಾಬಾದ್-ಕರ್ನಾಟಕ ವೃಂದದ ಗಣತಿದಾರರು 06 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ:16-04-2025ರಂದು ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ) ನಿಯಮಗಳು 2006 ಹಾಗೂ 2015ರ ತಿದ್ದುಪಡಿ ನಿಯಮಗಳ ನಿಯಮ 8ರ ಅನ್ವಯ ಇಲಾಖೆಯ ಕೋರಿಕೆಯಂತೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ ಹುದ್ದೆಗಳಿಗೆ ಸೀಮಿತಗೊಳಿಸಿ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರೇಕಟಿಸಲಾಗಿದೆ.
Comments