Loading..!

ಕರ್ನಾಟಕ ಲೋಕಸೇವಾ ಆಯೋಗಯಿಂದ ವಿವಿಧ ಇಲಾಖೆಗಳ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by: Bhagya R K | Date:22 ಆಗಸ್ಟ್ 2025
Image not found

ಕರ್ನಾಟಕ ಲೋಕಸೇವಾ ಆಯೋಗ (KPSC)ವು ಸಹಕಾರ, ವಾಣಿಜ್ಯ ತೆರಿಗೆ, ರೇಷ್ಮೆ ಹಾಗೂ ಪೌರಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಗಳು ಅಂತಿಮ ಆಯ್ಕೆಪಟ್ಟಿಗಳಲ್ಲ, ಅಭ್ಯರ್ಥಿಗಳ ಮಾಹಿತಿಗಾಗಿ ಮಾತ್ರ ಪ್ರಕಟಿಸಲಾಗಿದೆ ಎಂದು ಆಯೋಗವು ಸ್ಪಷ್ಟಪಡಿಸಿದೆ.


ಪ್ರಮುಖ ವಿವರಗಳು :
✔️ ಸಹಕಾರ ಇಲಾಖೆ
          ಕರ್ನಾಟಕ ಲೋಕ ಸೇವಾ ಆಯೋಗದಿಂದ 18-03-2023 ರಲ್ಲಿ ಅಧಿಸೂಚಿಸಲಾದ ಸಹಕಾರ ಇಲಾಖೆಯಲ್ಲಿನ ಸಹಕಾರಿ ಸಂಘಗಳ ನಿರೀಕ್ಷಕರು 53 (ಹೈದರಾಬಾದ್ ಕರ್ನಾಟಕ ವೃಂದ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 


               ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ:10-02-2025 ರಂದು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ) ನಿಯಮಗಳು 2021ರ ತಿದ್ದುಪಡಿ ನಿಯಮಗಳ ನಿಯಮಗಳನ್ವಯ ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿದೆ.


✔️ ರೇಷ್ಮೆ ಇಲಾಖೆ : 
ಕರ್ನಾಟಕ ಲೋಕ ಸೇವಾ ಆಯೋಗದಿಂದ 29-08-2022 ರಲ್ಲಿ ಅಧಿಸೂಚಿಸಲಾದ ರೇಷ್ಮೆ ಇಲಾಖೆಯಲ್ಲಿನ ಸಹಕಾರಿ ಸಂಘಗಳ ನಿರೀಕ್ಷಕರು 72 (RPC) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 


               ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ:12-07-2024 ರಂದು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ) ನಿಯಮಗಳು 2021ರ ತಿದ್ದುಪಡಿ ನಿಯಮಗಳ ನಿಯಮಗಳನ್ವಯ ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು 10-09-2024 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ: ಇಲಾಖೆಯ ಬೇಡಿಕೆಯಂತೆ ಮತ್ತೊಂದು ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.


✔️ ಪೌರಾಡಳಿತ ಇಲಾಖೆ : 
ಕರ್ನಾಟಕ ಲೋಕ ಸೇವಾ ಆಯೋಗದಿಂದ 31-07-2020 ರಲ್ಲಿ ಅಧಿಸೂಚಿಸಲಾದ ಪೌರಾಡಳಿತ ಇಲಾಖೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕರವಸೂಲಿಗಾರರು 10 (ಹೈ.ಕ)  ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 


               ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ : 11-08-2023 ರಂದು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ) ನಿಯಮಗಳು 2021ರ ತಿದ್ದುಪಡಿ ನಿಯಮಗಳ ನಿಯಮಗಳನ್ವಯ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ: ಇಲಾಖೆಯ ಬೇಡಿಕೆಯಂತೆ ಮತ್ತೊಂದು ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.


ಮುಖ್ಯ ಸೂಚನೆ:
ಪ್ರಕಟಿಸಿರುವ ಪಟ್ಟಿಗಳು ಅಂತಿಮ ಆಯ್ಕೆಪಟ್ಟಿಗಳಲ್ಲ. ಇಲಾಖೆಯ ಬೇಡಿಕೆ ಮತ್ತು ಹುದ್ದೆಗಳ ಖಾಲಿತನದ ಆಧಾರದ ಮೇಲೆ ಹೆಚ್ಚುವರಿ ಆಯ್ಕೆಪಟ್ಟಿ ಮಾತ್ರವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್ಸಿ ಅಧಿಕೃತ ವೆಬ್‌ಸೈಟ್ (https://kpsc.kar.nic.in) ಗೆ ಭೇಟಿ ನೀಡಬಹುದು.

Comments