ಕರ್ನಾಟಕ ಲೋಕ ಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದಲ್ಲಿನ ಚಾಲಕ ಕಂ ನಿರ್ವಾಹಕ ಹದ್ದೆಗಳ ನೇಮಕಾತಿಗಾಗಿ 4-02-2020 ರಲ್ಲಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕಾತಿಯ ಮುಂದಿನ ಹಂತವಾದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಕಟಿಸಿ ಆಕ್ಷೇಪಣೆಗಳನ್ನು ಸಲ್ಲಿಸಲು 11-06-2025 ವರೆಗೆ ಕಾಲಾವಕಾಶವನ್ನು ನೀಡಿತ್ತು.
ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು Driver cum Conductor ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ Final Select List ನಲ್ಲಿ ಆಯ್ಕೆಯಾಗಿ ವಿವಿಧ ವಿಭಾಗಗಳಿಗೆ ನಿಯೋಜಿಸಿದರೂ ಕರ್ತವ್ಯಕ್ಕೆ ಹಾಜರಾಗದ 143 ಅಭ್ಯರ್ಥಿಗಳ ಸ್ಥಾನಗಳಿಗೆ KSRTC ಯು ಇದೀಗ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಿದೆ.
ಸೂಚನೆ : ಅಭ್ಯರ್ಥಿಗಳು ಈ ಕುರಿತು ಹೆಚ್ಚಿನ ಮಾಹಿತಿಯನ್ನು http://kpsc.kar.nic.in ಆಯೋಗದ ವೆಬ್‌ಸೈಟ್ ಮೂಲಕ ಪಡೆಯಬಹುದು.
Comments