ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಡಿಯಲ್ಲಿ 230 (ಉಳಿಕೆ ಮೂಲ ವೃಂದ) ವಾಣಿಜ್ಯ ತೆರಿಗೆ ನಿರೀಕ್ಷಕ (Commercial Tax Inspector - CTI) ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಅಂತಿಮ ಆಯ್ಕೆಪಟ್ಟಿಯನ್ನು ಇದೀಗ ಅಧಿಕೃತವಾಗಿ ಪ್ರಕಟಿಸಿದೆ.
ಕರ್ನಾಟಕ ಲೋಕಸೇವಾ ಆಯೋಗ (KPSC)ಯು 28-08-2023ರಲ್ಲಿ ಅಧಿಸೂಚಿಸಲಾದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ನಿರೀಕ್ಷಕ (Commercial Tax Inspector - CTI) 230 ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು 2024 ಕಳೆದ ಜನವರಿ 20 ಮತ್ತು 21, 2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು.
ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ನಿರೀಕ್ಷಕರ 230 ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರ ನಿಯಮಗಳು ಹಾಗೂ ತಿದ್ದುಪಡಿ ನಿಯಮಗಳನ್ವಯ ದಿನಾಂಕ: 10-02-2025ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕ ಸೇವಾ ಆಯೋಗವು ಪ್ರಕಟಿಸಿತ್ತು, ಸದರಿ ಅಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶವನ್ನು ನೀಡಲಾಗಿತ್ತು. ಸದರಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಇದೀಗ ಕರ್ನಾಟಕ ಲೋಕಸೇವಾ ಆಯೋಗ (KPSC)ವು ಅಂತಿಮ ಆಯ್ಕೆಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
📌 ಪ್ರಮುಖ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ: 230 (Non-HK)
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ + ದಾಖಲೆ ಪರಿಶೀಲನೆ
ಆಯ್ಕೆಪಟ್ಟಿ ಪ್ರಕಟಣೆ ದಿನಾಂಕ: 15 ಜುಲೈ 2025
📄 ಆಯ್ಕೆಪಟ್ಟಿ ಪರಿಶೀಲನೆ:
ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ KPSC ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಅಭ್ಯರ್ಥಿಗಳು ತಮ್ಮ ಹೆಸರು, ಹುದ್ದೆಯ ಶ್ರೇಣಿ ಮತ್ತು ಲಿಂಗಸೂಚಕ ವಿವರಗಳೊಂದಿಗೆ ಆಯ್ಕೆಪಟ್ಟಿಯನ್ನು ಪರಿಶೀಲಿಸಬಹುದು.
🔗 KPSC ಅಧಿಕೃತ ವೆಬ್‌ಸೈಟ್ – https://www.kpsc.kar.nic.in
🎉 ಅಭಿನಂದನೆಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ!
ವಾಣಿಜ್ಯ ತೆರಿಗೆ ಇಲಾಖೆ ಸುತ್ತಮುತ್ತಲ ಕಾರ್ಯಚಟುವಟಿಕೆಯಲ್ಲಿ ಪ್ರಮುಖ ಪಾತ್ರ ವಹಿಸುವ CTI ಹುದ್ದೆ ಪಡೆಯಲು ಅವಕಾಶ ಪಡೆದ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ತರಬೇತಿ ಮತ್ತು ನೇಮಕಾತಿ ಸಂಬಂಧಿತ ಮುಂದಿನ ಹಂತಗಳು ಪ್ರಾರಂಭವಾಗಲಿವೆ.
Comments