ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ 'ಎ' ವೃಂದದ ಹುದ್ದೆಗಳ ಲಿಖಿತ ಪರೀಕ್ಷೆ ದಿನಾಂಕ ಪ್ರಕಟ
Published by: Basavaraj Halli | Date:28 ಫೆಬ್ರುವರಿ 2020

ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ 'ಎ' ವೃಂದದ ಒಟ್ಟು 24 ಹುದ್ದೆಗಳಿಗೆ ದಿನಾಂಕ 05 ಸೆಪ್ಟೆಂಬರ್ 2018 ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಸದರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಓಎಂಆರ್ ಮಾದರಿಯಲ್ಲಿ ದಿನಾಂಕ 22 ಮಾರ್ಚ್ 2020 ರ ಭಾನುವಾರದಂದು ನಡೆಸಲು ತೀರ್ಮಾನಿಸಲಾಗಿದ್ದು, ಈ ಕುರಿತ ವೇಳಾಪಟ್ಟಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.





Comments