ಕರ್ನಾಟಕ ಲೋಕಸೇವಾ ಆಯೋಗದಿಂದ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ಅರ್ಹತಾ ಪಟ್ಟಿ ಪ್ರಕಟ
Published by: Basavaraj Halli | Date:20 ನವೆಂಬರ್ 2020

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 22 ನವೆಂಬರ್ 2018 ರಂದು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಒಟ್ಟು 59 ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಜೇಷ್ಠತೆ ಆಧಾರದ ಮೇಲೆ 1 ಅನುಪಾತ 5 (1:5) ರಂತೆ ಅರ್ಹ ಅಭ್ಯರ್ಥಿಗಳಿಗೆ ದೇಹದಾರ್ಡ್ಯತೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ ಇದರಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳ ಅಂಕಗಳ ಜೇಷ್ಠತೆ ಹಾಗೂ ಅವರು ಕೋರಿರುವ ಮೀಸಲಾತಿಗಳಿಗೆ ಅನುಗುಣವಾಗಿ 1 ಅನುಪಾತ 2 (1:2)ರಂತೆ ಮೂಲ ದಾಖಲಾತಿ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಕೆಪಿಎಸ್ ಸಿಯು ಇದೀಗ ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ರಿಯಾಯಿತಿ ದರದಲ್ಲಿ ಸ್ಪರ್ಧಾತ್ಮಕ ಪುಸ್ತಕಗಳನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
ರಿಯಾಯಿತಿ ದರದಲ್ಲಿ ಸ್ಪರ್ಧಾತ್ಮಕ ಪುಸ್ತಕಗಳನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅರ್ಹತಾ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments