ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ತಿದ್ದುಪಡಿ ಅಧಿಸೂಚನೆ ಪ್ರಕಟ
Published by: Basavaraj Halli | Date:20 ಆಗಸ್ಟ್ 2021

ಕರ್ನಾಟಕ ಲೋಕಸೇವಾ ಆಯೋಗವು 2019 ನೇ ಸಾಲಿನ ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕರು ಅಥವಾ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ವೃಂದದ ಒಟ್ಟು 3 ಹುದ್ದೆಗಳಲ್ಲಿ 2 ಹುದ್ದೆಗಳನ್ನು ಅಧಿಸೂಚನೆಯಿಂದ ಹಿಂಪಡೆಯಲಾಗಿದ್ದು, ಸಾಮಾನ್ಯ ಅಭ್ಯರ್ಥಿ ಇತರೆ - 1 ಹುದ್ದೆಯನ್ನು ಮಾತ್ರ ಮುಂದಿನ ನೇಮಕಾತಿಗೆ ಪರಿಗಣಿಸಲಾಗುವುದೆಂದು KPSC ಯು ಪ್ರಕಟನೆಯಲ್ಲಿ ತಿಳಿಸಿದೆ.
ಈ ಕುರಿತ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments