Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ FDA ಪರೀಕ್ಷಾ ತಿದ್ದುಪಡಿ ಅಧಿಸೂಚನೆ ಪ್ರಕಟ
Published by: Basavaraj Halli | Date:27 ಜುಲೈ 2021
Image not found
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 23 ಜನೆವರಿ 2021ರಂದು 2019 ನೇ ಸಾಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಆದರೆ ಸದರಿ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಯಲ್ಲಿನ ಬಾರ್ ಕೋಡ್ / ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಪರೀಕ್ಷೆಯ ಮೌಲ್ಯಮಾಪನ ಮಾಡಲು ಸಾಧ್ಯವಾಗದೇ ಇರುವ ಕಾರಣ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮಾತ್ರ ರದ್ದುಪಡಿಸಿ ಕೆಪಿಎಸ್ಸಿಯು ಆದೇಶ ಹೊರಡಿಸಿದೆ.

ಮುಂದಿನ ದಿನಗಳಲ್ಲಿ ಅರ್ಹತಾ ಪಟ್ಟಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾತ್ರ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಿ ಅದರಲ್ಲಿನ ಅರ್ಹತೆಯ ಆಧಾರದ ಮೇಲೆ ಮುಂದಿನ ನೇಮಕಾತಿ ಪ್ರಕ್ರಿಯೆ ಪರಿಗಣಿಸಲಾಗುವುದು KPSCಯು ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

Comments

Sangeeta Rathod ಜುಲೈ 27, 2021, 6:32 ಅಪರಾಹ್ನ
Sangeetha L ಜುಲೈ 27, 2021, 7:35 ಅಪರಾಹ್ನ
Sushma M ಜುಲೈ 27, 2021, 8:40 ಅಪರಾಹ್ನ