Loading..!

KPSCಯಿಂದ ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು ಹುದ್ದೆಗಳ ಅಂತಿಮ‌ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Bhagya R K | Date:27 ಡಿಸೆಂಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 30/09/2022 ರಂದು ಅಧಿಸೂಚಿಸಲಾದ ಕಾರ್ಮಿಕ ಇಲಾಖೆಯಲ್ಲಿನ 06 (HK) ವೃಂದದ ಕಾರ್ಮಿಕ ನಿರೀಕ್ಷಕರು ( Labour Inspector) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವಾ ನಿಯಮಗಳನ್ವಯ 04/10/2023 ರಂದು ಕರ್ನಾಟಕ ಲೋಕಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿ , ಈ ಸಂಬಂಧ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಇದೀಗ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.  KPSCಯ ಅಂತರ್ಜಾಲದಲ್ಲಿ ಇದೀಗ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments