ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 13-03-2024 ರಂದು ಅಧಿಸೂಚಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರು/ತಾಲ್ಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಸದರಿ ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಲೋಕ ಸೇವಾ ಆಯೋಗವು ದಿನಾಂಕ:25-01-2025ರಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಗಳ ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) (ವಿಷಯ ಸಂಕೇತ-609) ಮತ್ತು ದಿನಾಂಕ:31-01-2025ರಂದು ನಡೆಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) ಹುದ್ದೆಗಳ ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) (ವಿಷಯ ಸಂಕೇತ-610)ರ ಸ್ಪರ್ಧಾತ್ಮಕ ಪರೀಕ್ಷೆಯ ಕೀ-ಉತ್ತರಗಳನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿರುತ್ತದೆ.
ಅಭ್ಯರ್ಥಿಗಳು ಸದರಿ "ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:15-04-2025ರಂದು ಸಂಜೆ 5-30 ರೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿರುತ್ತದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ವಿಳಾಸ :
ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001
ಈ ವಿಳಾಸಕ್ಕೆ ಮಾತ್ರ ತಲುಪುವಂತೆ ಕಳುಹಿಸತಕ್ಕದ್ದು, ಆಕ್ಷೇಪಣೆಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ: 15-04-2025ರ ಸಂಜೆ 5:30 ಆಗಿದ್ದು, ಈ ಅವಧಿಯ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ." ಅಭ್ಯರ್ಥಿಗಳ ಆಕ್ಷೇಪಣೆಗಳು ಅಂಚೆಯ ಮೂಲಕ ಆಯೋಗಕ್ಕೆ ತಲುಪಲು ವಿಳಂಬವಾದಲ್ಲಿ ಕೆ.ಪಿ.ಎಸ್.ಸಿ.ಯು ಜವಾಬ್ದಾರಿಯಾಗಿರುವುದಿಲ್ಲ.
ಪ್ರಮುಖ ಅಂಶಗಳು :
1) ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಆಯೋಗದ ಜಾಲತಾಣದಲ್ಲಿ ಪ್ರಕಟಿಸಿರುವ ನಮೂನೆಯಲ್ಲಿಯೇ (ಕನ್ನಡ ಅಥವಾ ಇಂಗ್ಲೀಷ್) ಸಲ್ಲಿಸಬೇಕು.
2) ಆಕ್ಷೇಪಣೆಗಳನ್ನು ಸಲ್ಲಿಸುವ ಪ್ರತಿ ಪ್ರಶ್ನೆಗೆ ರೂ.50/-ರಂತೆ ಶುಲ್ಕವನ್ನು (ಐ.ಪಿ.ಓ ಅಥವಾ ಡಿ.ಡಿ. ಮೂಲಕ) ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು, ಇವರ ಹೆಸರಿಗೆ ಸಂದಾಯ ಮಾಡಬೇಕು.
3) ಶುಲ್ಕ ಸಂದಾಯ ಮಾಡದ ಆಕ್ಷೇಪಣಾ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
4) ಪ್ರತಿ ಪ್ರಶ್ನೆಯ ಕೀ ಉತ್ತರಕ್ಕೆ ಸಲ್ಲಿಸುವ ಆಕ್ಷೇಪಣೆಗಳಿಗೆ ಪೂರಕವಾಗಿ ಸಲ್ಲಿಸುವ ದಾಖಲೆಗಳಿಗೆ ಸಂಬಂಧಿಸಿದಂತೆ ಲೇಖಕರ ಹೆಸರು. ಪ್ರಕಾಶನದ ಪ್ರತಿ ಇತ್ಯಾದಿ ವಿವರಗಳನ್ನು ಆಕ್ಷೇಪಣೆಗಳೊಂದಿಗೆ ನಿಗದಿತ ನಮೂನೆಯಲ್ಲಿ ನಮೂದಿಸತಕ್ಕದ್ದು.
5) ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು.
6) ದಾಖಲೆಗಳ ಪ್ರತಿ ಪುಟದ ಮೇಲೆ ಪ್ರಶ್ನೆ ಸಂಖ್ಯೆ ಮತ್ತು ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯತಕ್ಕದ್ದು.
7) ಆಕ್ಷೇಪಣೆಯೊಂದಿಗೆ ಅಭ್ಯರ್ಥಿಯು ದೃಢೀಕರಿಸಿದ ಪ್ರವೇಶ ಪತ್ರದ ಪ್ರತಿಯನ್ನು ಪರಿಶೀಲನೆಗಾಗಿ ಲಗತ್ತಿಸಬೇಕು.
Comments