ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್, ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು ಮತ್ತು ಬಾಯ್ದರುಗಳ ಸಹಾಯಕ ನಿರ್ದೇಶಕರು ಹಾಗೂ ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂ ವಿಜ್ಞಾನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕ್ತಿಯ ಮುಂದಿನ ಹಂತವಾದ ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) ಪರೀಕ್ಷೆಯನ್ನು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು.
ಇದೀಗ KPSCಯು ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆದ ನಿರ್ದಿಷ್ಟ ಪತ್ರಿಕೆ (ಪತ್ರಿಕೆ-2) ಪರೀಕ್ಷೆಯ ಕೀ-ಉತ್ತರಗಳನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ಸದರಿ ಹುದ್ದೆಗಳ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದಲ್ಲಿ16-05-2025ರಂದು ಸಂಜೆ 5-30 ರೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿರುತ್ತದೆ. ಈ ಅವಧಿಯ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ
ಆಕ್ಷೇಪಣೆಗಳನ್ನು ಸಲ್ಲಿಸುವ ವಿಳಾಸ :
ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001






Comments