ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 30/07/2020ರ ಅಧಿಸೂಚನೆಗೆ ತಿದ್ದುಪಡಿ | ಈ ಕುರಿತ ಮಾಹಿತಿ ನಿಮಗಾಗಿ
Published by: Basavaraj Halli | Date:29 ಅಕ್ಟೋಬರ್ 2021

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 30/07/2020ರಂದು ಆಯುಷ್ ಇಲಾಖೆಯಲ್ಲಿನ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್ ಸಿ ಹುದ್ದೆಗಳಾದ ಶುಶ್ರೂಷಕರು (22+1) ಮತ್ತು ಔಷಧ ವಿತರಕ ಔಷಧ ವಿತರಕರು (73+3) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿತ್ತು.
ಸದರಿ ಇಲಾಖೆಯ ವೃಂದ ಮತ್ತು ನೇಮಕಾತಿಯಲ್ಲಿರುವ ಹುದ್ದೆಗಳಿಗೂ ಹಾಗೂ ಅಧಿಸೂಚನೆಯಲ್ಲಿರುವ ಹುದ್ದೆಗಳಿಗೂ ವ್ಯತ್ಯಾಸ ಕಂಡುಬಂದಿರುವ ಹಿನ್ನೆಲೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ 73 ಹುದ್ದೆಗಳಲ್ಲಿ 57 ಹುದ್ದೆಗಳನ್ನು ಮಾತ್ರ ಭರ್ತಿ ಮಾಡುವುದಾಗಿ ಆಯೋಗವು ತನ್ನ ಜಾಲತಾಣದಲ್ಲಿ ಪ್ರಕಟಣೆ ಹೊರಡಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ತಿದ್ದುಪಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
KPSC ಗ್ರೂಪ್-C ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Comments