Loading..!

KPSC Group-C ಪರೀಕ್ಷಾ ದಿನಾಂಕ ಪ್ರಕಟ - ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by: Yallamma G | Date:11 ಜುಲೈ 2025
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ಇಲಾಖೆಯಗಳ Group-C ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ. ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲು ನಿಗದಿಪಡಿಸಲಾದ ಸಂಭವನೀಯ ದಿನಾಂಕಗಳ ವಿವರಗಳ ಪಟ್ಟಿಯನ್ನು ಪ್ರಕಟಿಸಿದೆ. 


➡️ ವಿವಿಧ ಇಲಾಖೆಯಗಳ Group-C ವೃಂದದ ಹುದ್ದೆಗಳ ವಿವರ : 
1. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು 19 ಹುದ್ದೆಗಳು
2. ಕಾರ್ಖಾನೆಗಳು, ಬಾಯರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು - 02 ಹುದ್ದೆಗಳು
3. ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರು - 03 ಹುದ್ದೆಗಳು
4. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1)-08 ಹುದ್ದೆಗಳು
5. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲಿನ ಸಹಾಯಕ ನಿರ್ದೇಶಕರು - 03 ಹುದ್ದೆಗಳು
6. ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂ ವಿಜ್ಞಾನಿ- 15 ಹುದ್ದೆಗಳು


ಈ ಮೇಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ವೃಂದ ವಿವಿಧ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ 26-07-2025 ರಂದು ಮಧ್ಯಾಹ್ನ 02-00 ಗಂಟೆಯಿಂದ 04-00 ಗಂಟೆಯವರೆಗೆ ನಡೆಸಲಾಗುತ್ತದೆ. Group-C ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿ, ಯಶಸ್ಸು ನಿಮ್ಮದಾಗಲಿ. 


📅 ಪರೀಕ್ಷೆ ದಿನಾಂಕ : 26-07-2025
📍 ಪರೀಕ್ಷಾ ಸ್ಥಳಗಳು: ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಸ್ಥಾಪಿತ ಪರೀಕ್ಷಾ ಕೇಂದ್ರಗಳು
📢 ಅಭ್ಯರ್ಥಿಗಳು ತಮ್ಮ User ID ಹಾಗೂ Password ಬಳಸಿ ವೆಬ್‌ಸೈಟ್‌ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು.


* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Comments