KPSC Group-C ಹುದ್ದೆಯ ಆಕಾಂಕ್ಷಿ ಅಭ್ಯರ್ಥಿಗಳೇ, ನೀವು ಇತ್ತೀಚಿಗೆ ಅಂದರೆ ದಿನಾಂಕ 03-09-2025 ಮತ್ತು 19/09/2025 ರಂದು ನಡೆದ ವಿವಿದ ಇಲಾಖೆಗಳಲ್ಲಿ ಖಾಲಿ ಇರುವ ಪದವಿ ಪೂರ್ವ ವಿದ್ಯಾರ್ಹತೆಯ ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪರೀಕ್ಷಾ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟಗೊಂಡಿವೆ, ನಿಮ್ಮ ಪ್ರಶ್ನೆ ಪತ್ರಿಕೆಗಳಲ್ಲಿ ಎಷ್ಟು ಸರಿ ಉತ್ತರಗಳಿವೆ ಎಂದು ಎಣಿಸುತ್ತಿದ್ದೀರಾ? ಕರ್ನಾಟಕ ಲೋಕಸೇವಾ ಆಯೋಗದ ಪರಿಷ್ಕೃತ ಕೀ ಉತ್ತರಗಳು ಒಮ್ಮೆ ಪರಿಶೀಲಿಸಿ.
➡️ ಕರ್ನಾಟಕ ಲೋಕಸೇವಾ ಆಯೋಗ (KPSC)ವು ವಿವಿಧ ಇಲಾಖೆಯಲ್ಲಿನ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ 15-03-2024 ರಂದು ಅದಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ನೇಮಕಾತಿಯ ಮುಂದಿನ ಹಂತವಾದ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 (ವಿಷಯ ಸಂಕೇತ 660) ಮತ್ತು ಪತ್ರಿಕೆ-2 (ವಿಷಯ ಸಂಕೇತ-661)ರ ಪರೀಕ್ಷೆಯನ್ನು ದಿನಾಂಕ: 03-09-2025 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು.
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 ಮತ್ತು ಪತ್ರಿಕೆ-2 ರ ಕೀ-ಉತ್ತರಗಳನ್ನು ದಿ: 30-10-2025 ರಂದು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿ: 06-11-2025ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು
➡️ ಕರ್ನಾಟಕ ಲೋಕಸೇವಾ ಆಯೋಗ (KPSC)ವು ವಿವಿಧ ಇಲಾಖೆಯಲ್ಲಿನ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ 15-03-2024 ರಂದು ಅದಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ನೇಮಕಾತಿಯ ಮುಂದಿನ ಹಂತವಾದ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 (ವಿಷಯ ಸಂಕೇತ 666) ಮತ್ತು ಪತ್ರಿಕೆ-2 (ವಿಷಯ ಸಂಕೇತ-667)ರ ಪರೀಕ್ಷೆಯನ್ನು ದಿನಾಂಕ: 19-09-2025 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು.
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 ಮತ್ತು ಪತ್ರಿಕೆ-2 ರ ಕೀ-ಉತ್ತರಗಳನ್ನು ದಿ: 30-10-2025 ರಂದು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿ: 06-11-2025ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು
ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳ ಈ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ, ಸಾಮಾನ್ಯ ಜ್ಞಾನ ಪತ್ರಿಕೆ-1 ಮತ್ತು ಪತ್ರಿಕೆ-2 ಸಂಬಂಧಿಸಿದಂತೆ ಅಂತಿಮವಾಗಿಪರಿಷ್ಕೃತ ಕೀ ಉತ್ತರಗಳನ್ನು ಇದೀಗ ಪ್ರಕಟಿಸಲಾಗಿದೆ.
📌 ಸೂಚನೆ: ಪರಿಷ್ಕೃತ ಕೀ-ಉತ್ತರಗಳು ಪ್ರಕಟಿಸಿದ ನಂತರ, ಕೀ-ಉತ್ತರ/ ಪರಿಷ್ಕೃತ ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಸಲ್ಲಿಸುವ ಯಾವುದೇ ಮನವಿ/ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.





Comments