ಕರ್ನಾಟಕ ಲೋಕಸೇವಾ ಆಯೋಗವು 2024-25 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ (KAS) ಗ್ರೂಪ್ - 'ಎ' ಮತ್ತು ಗ್ರೂಪ್- 'ಬಿ' ವೃಂದದ 384 ಹುದ್ದೆಗಳ ನೇಮಕಾತಿಗಾಗಿ 26/02/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕಾತಿಯ ಮುಂದಿನ ಹಂತವಾದ ಪೂರ್ವಭಾವಿ ಪರೀಕ್ಷೆಯನ್ನು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿದ್ದು ಇದೀಗ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ನೇಮಕಾತಿಯ ಮುಖ್ಯ (KAS Mains Exam) ಪರೀಕ್ಷೆಗಳು ದಿನಾಂಕ 03, 05, 07,ಮತ್ತು 09 May 2025 ರಂದು ನಡೆಯುತ್ತಿದ್ದು. ಕರ್ನಾಟಕ ಲೋಕಸೇವಾ ಆಯೋಗ(KPSC)ವು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪೂರ್ವ ಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರವನ್ನು ಆಯೋಗದ ವೆಬ್ ಸೈಟ್ http://kpsc.kar.nic.in ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಹಾಗೂ ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ವೆಬ್ ಸೈಟ್‌ನಲ್ಲಿ ಲಭ್ಯವಿರುತ್ತದೆ.
Comments