KPSC ಗೆಜೆಟೆಡ್ ಪ್ರೊಬೆಷನರಿ (KAS) ಹುದ್ದೆಗಳ ಮರು ಪರೀಕ್ಷೆಗಾಗಿ ಮಾನ್ಯ ಮುಖ್ಯಮಂತ್ರಿಗಳ ಆದೇಶ ! ಈ ಕುರಿತ ಮಾಹಿತಿ ನಿಮಗಾಗಿ
Published by: Basavaraj Halli | Date:2 ಸೆಪ್ಟೆಂಬರ್ 2024

ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇತ್ತೀಚಿಗೆ ನಡೆದ ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ (KPSC KAS) ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿ ವಿಚಾರದ ಕುರಿತು ಗಮನ ಹರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳೊಳಗಾಗಿ ಈ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿದ್ದು, ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತ್ತು ಮಾಡುವ ಕುರಿತು ಕ್ರಮ ಕೈಗೊಂಡಿರುತ್ತಾರೆ.
ಮುಂದೆ ಬರಲಿರುವ KAS ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಸಮರ್ಪಕವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದ್ದು, ಅಭ್ಯರ್ಥಿಗಳು ದೃತಿಗೆಡದೆ ತಮ್ಮ ತಯಾರಿಯನ್ನು ಮತ್ತಷ್ಟು ಚುರುಕು ಗೊಳಿಸಿ ಉತ್ತಮ ತಯಾರಿ ಮಾಡಿಕೊಳ್ಳಿ.
- ಈ ಕುರಿತ ಅಧಿಕೃತ ಮಾಹಿತಿ ಇನ್ನಷ್ಟೇ KPSC ಜಾಲತಾಣದಲ್ಲಿ ಪ್ರಕಟಗೊಳ್ಳಲಿದೆ ನಿರೀಕ್ಷಿಸಿ...

Comments