KREIS/Murarji Desai/Navodaya/Adarsha
04 ಜುಲೈ 2019
7 years ago
KPSC ಯಿಂದ KREIS ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ ದೈಹಿಕ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಮತ್ತು ಶುಶ್ರೂಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ
ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(KRIES)ದಲ್ಲಿ ಖಾಲಿ ಇರುವ 3000 ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಂಡಿದ್ದು ಈ ನೇಮಕಾತಿ ಪ್ರಕಿಯೆಯ ದೈಹಿಕ ಶಿಕ್ಷಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಮತ್ತು ಸ್ಟಾಫ್ ನರ್ಸ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ, 2017 ರ ಅಕ್ಟೋಬರ್ ತಿಂಗಳಲ್ಲಿ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿದ್ದು 2018 ರ ಅಕ್ಟೋಬರ್ ತಿಂಗಳಲ್ಲಿ ಅರ್ಹತಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ನಡೆದಿತ್ತು. ಆಯ್ಕೆ ಪಟ್ಟಿ ನೋಡಲು ಈ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
KRIES ನ ಸ್ಟಾಫ್ ನರ್ಸ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಏನಾದರು ಆಕ್ಷೇಪಣೆಯಿದ್ದಲ್ಲಿ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆಯೋಗಕ್ಕೆ ಮನವಿ ಸಲ್ಲಿಸಲು ಅವಕಾಶವಿರುತ್ತದೆ.
ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ
Comments