ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಹುದ್ದೆಗಳ ಮುಖ್ಯ ಪರೀಕ್ಷೆ ಮುಂದೂಡಿಕೆ
Published by: Basavaraj Halli | Date:15 ಡಿಸೆಂಬರ್ 2020

ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ 21 ಡಿಸೆಂಬರ್ 2020 ರಿಂದ 24 ಡಿಸೆಂಬರ್ 2020 ರವರೆಗೆ ನಡೆಸಬೇಕಿದ್ದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಹುದ್ದೆಗಳ ಮುಖ್ಯ ಪರೀಕ್ಷೆಯನ್ನು, ದಿನಾಂಕ 22 ಡಿಸೆಂಬರ್ 2020 ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿರುವ ಕಾರಣ ತಾತ್ಕಾಲಿಕವಾಗಿ ಮುಂದೂಡಿದೆ.
* KPSC ಯು ದಿನಾಂಕ 22 ಡಿಸೆಂಬರ್ 2020 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮಾತ್ರ ದಿನಾಂಕ 28 ಡಿಸೆಂಬರ್ 2020 ನೇ ತಾರೀಖಿನಂದು ಮುಂದೂಡಿದೆ ಹಾಗೂ ಉಳಿದ ದಿನಾಂಕಗಳಂದು ನಡೆಯಬೇಕಿದ್ದ ಪರೀಕ್ಷೆಗಳು ಯಥಾರೀತಿ ನಡೆಯಲಿರುವದಾಗಿ ಕೆಪಿಎಸ್ಸಿಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಣೆಯನ್ನು ಹೊರಡಿಸಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ

Comments