Loading..!

KPSCಯಿಂದ PDO ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:7 ಎಪ್ರಿಲ್ 2025
Image not found

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 15-03-2024 ರಂದು ಅಧಿಸೂಚಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) 150 ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 


        ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ದಿನಾಂಕ 08-ಡಿಸೆಂಬರ್-2024 ರಂದು ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. 08-12-2024ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 (ವಿಷಯ ಸಂಕೇತ-587) ಮತ್ತು ಪತ್ರಿಕೆ-2 (ವಿಷಯ ಸಂಕೇತ-588)ರ ಕೀ-ಉತ್ತರಗಳನ್ನು ದಿನಾಂಕ: 24-02-2025 ರಂದು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 03-03-2025 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು. ಅದರಂತೆ, ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ, ಸಾಮಾನ್ಯ ಜ್ಞಾನ ಪತ್ರಿಕೆ-1 (ವಿಷಯ ಸಂಕೇತ-587) ಮತ್ತು ಪತ್ರಿಕೆ-2 (ವಿಷಯ ಸಂಕೇತ-588)ಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತಗೊಳ್ಳುತ್ತಿರುವ ಕೀ-ಉತ್ತರಗಳನ್ನು ಇದೀಗ ಬಿಡುಗಡೆಗೊಳಿಸಲಾಗಿದೆ. 


* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ  ಪರಿಷ್ಕೃತ ಸರಿ ಉತ್ತರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Comments