Loading..!

KPSCಯಿಂದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Yallamma G | Date:29 ಡಿಸೆಂಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 14/10/2022 ರಂದು ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಅಭಿಯಂತರರು/ JE (Civil) HK ವೃಂದದ 166 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು KPSCಯ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
* ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ ದಿನದಿಂದ 7 ದಿನಗಳ ಒಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ,

ಉದ್ಯೋಗ ಸೌಧ, ಬೆಂಗಳೂರು-560001 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments