KPSC 31 ಅಕ್ಟೋಬರ್ 2020 5 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ 493 ಹುದ್ದೆಗಳ ನೇಮಕಾತಿ ರದ್ದು ಈ ಕುರಿತು ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ 493 ಹುದ್ದೆಗಳ ನೇಮಕಾತಿ ರದ್ದು ಈ ಕುರಿತು ಮಾಹಿತಿ ನಿಮಗಾಗಿ
ಕರ್ನಾಟಕ ಲೋಕಸೇವಾ ಆಯೋಗವು ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ  ಆಶ್ರಮ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 25 ನವೆಂಬರ್ 2017 ರಲ್ಲಿ ಅಧಿಸೂಚನೆಯನ್ನು ಪ್ರಕಟಿಸಿತ್ತು. ಆದರೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ ಇವರ ಕೋರಿಕೆಯ ಮೇರೆಗೆ ಈ ಅಧಿಸೂಚನೆಯನ್ನು ದಿನಾಂಕ 22 ಜೂನ್ 2018ರಂದು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು.
ಪ್ರಸ್ತುತ ಈ ಹುದ್ದೆಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಕ ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಿರುವ ಹಿನ್ನಲೆ KPSCಯಿಂದ ಅಧಿಸೂಚಿಸಲಾದ ಈ ನೇಮಕಾತಿಯನ್ನು ಹಿಂಪಡೆಯಲಾಗಿದೆ ಎಂದು ಕೆಪಿಎಸ್ ಸಿಯು ತನ್ನ ಜಾಲತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಮಾಹಿತಿ ಪಡೆಯಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments