KPSC ಯಿಂದ ಶೀಘ್ರದಲ್ಲೇ RDWSD, BBMP, ಜಲಸಂಪನ್ಮೂಲ, ಇತರೆ ಇಲಾಖೆಗಳಲ್ಲಿ 500 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ
Published by: Yallamma G | Date:21 ಜೂನ್ 2024
ಕರ್ನಾಟಕ ಲೋಕ ಸೇವಾ ಆಯೋಗದಿಂದ ಕರ್ನಾಟಕ ರಾಜ್ಯದ ಪೌರಾಡಳಿತ ನಿರ್ದೇಶನಾಲಯ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಲಸಂಪನ್ಮೂಲ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಅಂತರ್ಜಲ ನಿರ್ದೇಶನಾಲಯ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಸುಮಾರು 500 ಕ್ಕೂ ಅಧಿಕ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಈ ಎಲ್ಲ ಇಲಾಖೆಗಳು ಕರ್ನಾಟಕ ಲೋಕಸೇವಾ ಆಯೋಗಕ್ಕೆ ನೇರ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಪ್ರಸ್ತಾವನೆ ಸಲ್ಲಿಸಿವೆ.

Comments