Loading..!

KPSC ಯಿಂದ ಜಲ ಸಂಪನ್ಮೂಲ ಇಲಾಖೆಯ ಹುದ್ದೆಗಳ ನೇಮಕಾತಿ ಕುರಿತು ಅಭ್ಯರ್ಥಿಗಳಿಗೆ ಮಾಹಿತಿ
Published by: Yallamma G | Date:15 ಮೇ 2024
not found

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ (ಉಳಿಕೆ ಮೂಲ ವೃಂದದ  ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದ) ಹುದ್ದೆಗಳಿಗೆ 3/03/2024 ರಂದು ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಸಿವಿಲ್ ಇಂಜಿನಿಯರ್ ಮತ್ತು  ಸಹಾಯಕ ಮೆಕ್ಯಾನಿಕಲ್ ಇಂಜಿನಿಯರ್ ಹುದ್ದೆಗಳಿಗೆ BE ಪದವಿ ವಿದ್ಯಾರ್ಹತೆಯನ್ನು ಹೊಂದಿದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು, ಆದರೆ ಇದೀಗ ಬಿ,ಟೆಕ್ ಪದವಿದರರಿಗೂ ಸಹ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಬಿ,ಟೆಕ್ ಪದವಿದರರಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡುವ ದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು14/05/2024 ರಿಂದ 24-05-2024 ರ ವರೆಗೆ ವಿಸ್ತರಿಸಲಾಗಿದೆ.

Comments