ಇದೇನು, ಗ್ರೂಪ್-ಸಿ ಪರೀಕ್ಷೆಗೆ ಅರ್ಜಿ ಹಾಕಿದ್ದು ನೆನಪಿದೆಯಾ? ಹಾಗಾದ್ರೆ ಆ ಮೊಬೈಲ್ ಅನ್ನು ತೆಗೆದುಕೊಂಡು ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಸಿದ್ಧರಾಗಿ!
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಗ್ರೂಪ್-ಸಿ ಹುದ್ದೆಗಳಿಗೆ ಪ್ರವೇಶ ಪತ್ರಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ನಿಮ್ಮ ಕನಸಿನ ಉದ್ಯೋಗಕ್ಕೆ ಮೊದಲ ಹೆಜ್ಜೆ ಇಲ್ಲಿಂದಲೇ ಪ್ರಾರಂಭ.
ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂ: ಪಿಎಸ್‌ಸಿ 503 ಆಟಿಬಿ-2/2023-24/3494, ದಿನಾಂಕ: 15-03-2024 ರಂದು ಅಧಿಸೂಚಿಸಲಾದ ಪದವಿ ಮಟ್ಟದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ವಿವಿಧ ಗ್ರೂಪ್ 'ಸಿ' 313 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡ ಭಾಷಾ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.
KPSC ಯು ಈ ಹಿಂದೆ16-03-2025 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಲ್ಲಿ, ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮ 2021ರ ತಿದ್ದುಪಡಿ ನಿಯಮಗಳ ಪ್ರಕಾರ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ಇಲ್ಲದವರು ಮಾತ್ರ ಈ ಪರೀಕ್ಷೆಗೆ ಹಾಜರಾಗಬೇಕು.
ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದಂತೆ ಕನ್ನಡ ಭಾಷಾ ಪರೀಕ್ಷೆಯನ್ನು 16-08-2025 ರಂದು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು 07-08-2025 ರಿಂದ ಆಯೋಗದ ಅಧಿಕೃತ ವೆಬ್‌ಸೈಟ್ http://kpsconline.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಹಾಗಾದರೆ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಬೇಕಾದರೆ ಏನು ಮಾಡಬೇಕು? ನಿಮ್ಮ ಅಪ್ಲಿಕೇಶನ್ ಸ್ಟೇಟಸ್ ನೋಡಲು ಯಾವ ಲಿಂಕ್ ಬಳಸಬೇಕು? ಪರೀಕ್ಷೆ ಬರೆಯಲು ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು?
- ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ಅಂತರ್ಜಾಲ http://kpsconline.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ಅಂತರ್ಜಾಲದಲ್ಲಿ ಲಭ್ಯವಿರುತ್ತದೆ.
- ಪರೀಕ್ಷೆಗೆ ಹಾಜರಾಗುವ ಮೊದಲು ಪ್ರವೇಶ ಪತ್ರದ ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ, ಸಮಯಕ್ಕೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ ಆಯೋಗವು ಸೂಚಿಸಿದೆ.
Comments