KPSC ಯಿಂದ ಸಾರಿಗೆ ಇಲಾಖೆಯಲ್ಲಿನ ಮೋಟಾರ್ ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ
Published by: Yallamma G | Date:18 ಎಪ್ರಿಲ್ 2025
Image not found

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದ ಮೋಟಾರು ವಾಹನ ನಿರೀಕ್ಷಕರು 127 + 23 (ಹೈ.ಕ) ಹುದ್ದೆಗಳ ನೇಮಕಾತಿಗಾಗಿ ದಿನಾಂಕ 04-02-2016 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರಿಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಆಯ್ಕೆಯ ಮೂಲಕ ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2006 ಹಾಗೂ 2015ರಡಿ, ಸರ್ಕಾರದ ದಿ:19-03-2020ರ ಪತ್ರದಂತೆ ಆಯೋಗವು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಿಸಿದ್ದ ರಿಟ್ ಅರ್ಜಿ ಸಂ. 8000/2020 ರಲ್ಲಿ ಆಯೋಗವು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿರುವಂತೆ ಹಾಗೂ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿದ್ದ ರಿಟ್ ಅರ್ಜಿ ಸಂ:6774/2020 ಮತ್ತು ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಿ:25-08-2021ರಂದು ನೀಡಿರುವ ನಿರ್ದೇಶನದಂತೆ ಸಿದ್ದಪಡಿಸಿ. ಸದರಿ ಅಂತಿಮ ಆಯ್ಕೆಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ಅಂತರ್ಜಾಲದಲ್ಲಿ ದಿ:22-07-2022 ರಂದು ಪ್ರಕಟಿಸಲಾಗಿತ್ತು. 


          ತದನಂತರ ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶದನ್ವಯ ಕ್ರಮವಾಗಿ ದಿನಾಂಕ:26-10-2023 ಮತ್ತು 13-02-2025ರಂದು ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಗಳನ್ನು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ನಿಯಮಾನುಸಾರ ಸದರಿ ಹುದ್ದೆಗಳಿಗೆ ಹೆಚ್ಚುವರಿ ಪಟ್ಟಿಯನ್ನು ಸಿದ್ದಪಡಿಸಿ ಈ ಮೂಲಕ ಪ್ರಕಟಿಸಲಾಗಿದೆ. 


      ನೇಮಕಾತಿಗೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ತಿದ್ದುಪಡಿಯಾಗಿದ್ದರಿಂದ KPSC ಯು ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 


* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments