ಕರ್ನಾಟಕ ಲೋಕಸೇವಾ ಆಯೋಗ (KPSC)ವು ಸಾರಿಗೆ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಮೋಟಾರು ವಾಹನ ನಿರೀಕ್ಷಕರ (Motor Vehicle Inspector) ಹುದ್ದೆಗಳ ನೇಮಕಾತಿಗೆ 2024ರ ಮಾರ್ಚ್ 14 ರಂದು ಅದಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ನೇಮಕಾತಿಯ ಮುಂದಿನ ಹಂತವಾದ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 (ವಿಷಯ ಸಂಕೇತ 650) ಮತ್ತು ಪತ್ರಿಕೆ-2 (ವಿಷಯ ಸಂಕೇತ-651)ರ ಪರೀಕ್ಷೆಯನ್ನು 14/05/2025 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು.
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 ಮತ್ತು ಪತ್ರಿಕೆ-2 ರ ಕೀ-ಉತ್ತರಗಳನ್ನು ದಿ: 29-05-2025 ರಂದು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿ: 05-06-2025 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು.
ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕ ಸೇವಾ ಆಯೋಗವು ಮೋಟಾರು ವಾಹನ ನಿರೀಕ್ಷಕರ (Motor Vehicle Inspector) ಹುದ್ದೆಗಳ ಈ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ, ಸಾಮಾನ್ಯ ಜ್ಞಾನ ಪತ್ರಿಕೆ-1 (ವಿಷಯ ಸಂಕೇತ-650) ಮತ್ತು ಪತ್ರಿಕೆ-2 (ವಿಷಯ ಸಂಕೇತ-651)ಕ್ಕೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತ ಕೀ ಉತ್ತರಗಳನ್ನು ಇದೀಗ ಪ್ರಕಟಿಸಲಾಗಿದೆ.
📌ಸೂಚನೆ: ಪರಿಷ್ಕೃತ ಕೀ-ಉತ್ತರಗಳು ಪ್ರಕಟಿಸಿದ ನಂತರ, ಕೀ-ಉತ್ತರ/ ಪರಿಷ್ಕೃತ ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಸಲ್ಲಿಸುವ ಯಾವುದೇ ಮನವಿ/ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
Comments