ಕರ್ನಾಟಕ ಲೋಕಸೇವಾ ಆಯೋಗವು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಟ್ಆಫ್ ಅಂಕಗಳನ್ನು ಪ್ರಕಟಿಸಿದೆ
Published by: Sanju Shirol | Date:20 ಜನವರಿ 2021

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 11/12/2019 ಗಳನ್ವಯ ಅಧಿಸೂಚಿಸಿದ್ದ ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯ, ಲಘು ವ್ಯವಹಾರಗಳ ನ್ಯಾಯಾಲಯ ಮತ್ತು ರಾಜ್ಯದ ವಿವಿಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿನ ಉಳಿಕೆ ಮೂಲ ವೃಂದದ ಒಟ್ಟು 494 ಮತ್ತು ಹೈ.ಕ ವೃಂದದ 81 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಟ್ಆಫ್ ಅಂಕಗಳ ಪಟ್ಟಿಯನ್ನು ಆಯೋಗದ ವೆಬ್ ಸೈಟ್ ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
* ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ 07 ದಿನಗಳಳೊಳಗಾಗಿ "ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು - 01" ಇವರಿಗೆ ಲಿಖಿತ ಮೂಲಕ ಸಲ್ಲಿಸಲು ಸೂಚಿಸಿದೆ, ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಿದೆ.

Comments