ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯ ಸರ್ಕಾರದ 38 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 661 ಬೆರಳಚ್ಚುಗಾರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯ ಸರ್ಕಾರದ 38 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 661 ಬೆರಳಚ್ಚುಗಾರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ
19 ಸೆಪ್ಟೆಂಬರ್ 2019 KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ದಿನಾಂಕ 16-11-2016 ರಂದು ಕರ್ನಾಟಕ ರಾಜ್ಯ ಸರ್ಕಾರದ 38 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 661 ಬೆರಳಚ್ಚುಗಾರ ಹುದ್ದೆಗಳಿಗೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಅಧಿಸೂಚನೆಯನ್ನು ಪ್ರಕಟಿಸಿತ್ತು. ಪ್ರಸ್ತುತ ಲೋಕಸೇವಾ ಆಯೋಗವು ಈ ಹುದ್ದೆಗಳ ನೇಮಕಾತಿಯಲ್ಲಿ ಸಿದ್ಧಪಡಿಸಲಾದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಎಂದು ತನ್ನ ಅಧಿಕೃತ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಸದರಿ ತಾತ್ಕಾಲಿಕ ಪಟ್ಟಿ ಪ್ರಕಟವಾದ ದಿನಾಂಕದಿಂದ 7 ದಿನಗಳ ಒಳಗೆ "ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01" ಇವರಿಗೆ ಸಲ್ಲಿಸಬಹುದಾಗಿದೆ. ಈ ಅವಧಿ ಮೀರಿದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಲೋಕಸೇವಾ ಆಯೋಗವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.