Life is like this loading!

We've to prepare well to perform better

ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯ ಸರ್ಕಾರದ 38 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 661 ಬೆರಳಚ್ಚುಗಾರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ
Author: Savita Halli | Date:23 ಸೆಪ್ಟೆಂಬರ್ 2019
Image not found

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ದಿನಾಂಕ 16-11-2016 ರಂದು ಕರ್ನಾಟಕ ರಾಜ್ಯ ಸರ್ಕಾರದ 38 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 661 ಬೆರಳಚ್ಚುಗಾರ ಹುದ್ದೆಗಳಿಗೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಅಧಿಸೂಚನೆಯನ್ನು ಪ್ರಕಟಿಸಿತ್ತು. ಪ್ರಸ್ತುತ ಲೋಕಸೇವಾ ಆಯೋಗವು ಈ ಹುದ್ದೆಗಳ ನೇಮಕಾತಿಯಲ್ಲಿ ಸಿದ್ಧಪಡಿಸಲಾದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಎಂದು ತನ್ನ ಅಧಿಕೃತ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಸದರಿ ತಾತ್ಕಾಲಿಕ ಪಟ್ಟಿ ಪ್ರಕಟವಾದ ದಿನಾಂಕದಿಂದ 7 ದಿನಗಳ ಒಳಗೆ "ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01" ಇವರಿಗೆ ಸಲ್ಲಿಸಬಹುದಾಗಿದೆ. ಈ ಅವಧಿ ಮೀರಿದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಲೋಕಸೇವಾ ಆಯೋಗವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ