ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ತಾತ್ಕಾಲಿಕ / ಅಂತಿಮ / ಹೆಚ್ಚುವರಿ ಆಯ್ಕೆ ಪಟ್ಟಿ ಹಾಗೂ CutOff ಅಂಕಗಳು ಪ್ರಕಟ
Published by: Basavaraj Halli | Date:24 ಸೆಪ್ಟೆಂಬರ್ 2021

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ದಿನಾಂಕಗಳಂದು ಅಧಿಸೂಚಿಸಿದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ, ಅಂತಿಮ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಗಳು ಹಾಗೂ CutOff ಅಂಕಗಳನ್ನು ದಿನಾಂಕ 24 ಸೆಪ್ಟೆಂಬರ್ 2021 ರಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖಾ ಪ್ರಕಟಿಸಿದ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
ಇಲ್ಲಿ ಪ್ರಕಟಿಸಿದ ತಾತ್ಕಾಲಿಕ ಆಯ್ಕೆಪಟ್ಟಿ ಗಳ ಕುರಿತಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಆಯ್ಕೆ ಪಟ್ಟಿಗಳು ಪ್ರಕಟಗೊಂಡ ಏಳು ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ ಬೆಂಗಳೂರು-560001 ಇವರಿಗೆ ಸಂಬಂಧಿತ ಹುದ್ದೆ / ವೃತ್ತಿ ಹೆಸರನ್ನು ಸ್ಪಷ್ಟವಾಗಿ ನಮೂದಿಸಿ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವ ಯಾವ ನೇಮಕಾತಿಗಳ ಆಯ್ಕೆಪಟ್ಟಿಗಳು ಹಾಗೂ CutOff ಅಂಕಗಳೆಂದು ತಿಳಿಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖಾ ಪ್ರಕಟಣೆಯನ್ನು ಓದಿಕೊಳ್ಳಿ

Comments