Loading..!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ AE (ಸಹಾಯಕ ಇಂಜಿನಿಯರ್) ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಇದೀಗ ಪ್ರಕಟ
Published by: Yallamma G | Date:13 ಡಿಸೆಂಬರ್ 2023
not found

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ 2021-2022ನೇ ಸಾಲಿನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು 24/07/2022 ರಂದು ಯಶಸ್ವಿಯಾಗಿ ನಡೆಸಲಾಗಿತ್ತು. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮತ್ತು ಮೂಲ ದಾಖಲಾತಿ ಪರಿಶೀಲನೆಯ ನಂತರ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ತನ್ನ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಿದೆ.
* ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 20/12/2023 ರೊಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವ ವಿಳಾಸ :
ನಿಗಮ ಕಾರ್ಯಾಲಯ ಕವಿಪ್ರನಿನಿ, ಕಾವೇರಿ ಭವನ ಬೆಂಗಳೂರ್-560009. 
* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿ ವೀಕ್ಷಿಸಬಹುದಾಗಿದೆ. 

Comments

User ಡಿಸೆಂ. 14, 2023, 10:55 ಅಪರಾಹ್ನ
User ಡಿಸೆಂ. 14, 2023, 10:59 ಅಪರಾಹ್ನ