Loading..!

KPTCL ನೇಮಕಾತಿ 2025: ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಸಮಾಲೋಚನಾ (Counselling) ದಿನಾಂಕ ಪ್ರಕಟ
Published by: Yallamma G | Date:9 ಡಿಸೆಂಬರ್ 2025
not found

 ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ತನ್ನ ನೇಮಕಾತಿ ಪ್ರಕ್ರಿಯೆಯಲ್ಲಿ ಮತ್ತೊಂದು ಮಹತ್ವದ ಹಂತವನ್ನು ಪ್ರಾರಂಭಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ಅಭ್ಯರ್ಥಿಗಳು ಗಮನಿಸಿ, 


          ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ನಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ 14/10/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕಾತಿಯ ಮುಂದಿನ ಹಂತವಾದ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ವು ಕಿರಿಯ ಸ್ಟೇಷನ್ ಪರಿಚಾರಕ (ಎನ್.ಕೆ.ಕೆ) ಮತ್ತು ಕಿರಿಯ ಪವರ್‌ಮ್ಯಾನ್ (ಎನ್.ಕೆ.ಕೆ) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕಟ್-ಆಫ್ ಅಂಕಗಳೊಂದಿಗೆ ಬಿಡುಗಡೆ ಮಾಡಲಾಗಿತ್ತು.


                           ಅಧಿಸೂಚನೆಯ ಪ್ರಕಾರ, ಎಸ್.ಎಸ್.ಎಲ್.ಸಿ (10ನೇ ತರಗತಿ) ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಜೇಷ್ಠತೆಯ ಆಧಾರದ ಮೇಲೆ, 2025ರ ಮೇ 05ರಿಂದ ಮೇ 08ರ ವರೆಗೆ ನಡೆಸಲಾದ ಸಹನ ಶಕ್ತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ 2025ರ ಆಗಸ್ಟ್ 06 ಮತ್ತು 28 ಆಗಸ್ಟ್ 2025ರಂದು ಅಂತಿಮ ಆಯ್ಕೆ ಪಟ್ಟಿ ಕಟ್-ಆಫ್ ಅಂಕಗಳೊಂದಿಗೆ ಪ್ರಕಟಿಸಲಾಗಿತ್ತು. 


             ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಹೊಂದಿರುವಂತಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಜಾರಿಗೊಳಿಸಲು ಕೌನ್ಸಿಲಿಂಗ್ ಪ್ರಕ್ರಿಯೆಯನ್ನು, ದಿನಾಂಕ: 10.12.2025 ಮತ್ತು 11.12.2025 ರಂದು ಹಮ್ಮಿಕೊಳ್ಳಲಾಗಿರುತ್ತದೆ. 
ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯುವ ಸ್ಥಳ : 
ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘ, ಸಿಲ್ವರ್ ಜ್ಯೂಬಿಲಿ ಕಟ್ಟಡ, ರೇಸ್ ಕೋರ್ಸ್ ಕ್ರಾಸ್ ರಸ್ತೆ, ಆನಂದರಾವ್ ವೃತ್ತ, ಬೆಂಗಳೂರು-560009 


 ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ https://kptcl.karnataka.gov.in ಭೇಟಿ ನೀಡತಕ್ಕದ್ದು.

Comments