ಕರ್ನಾಟಕ ವಿದ್ಯುತ ಪ್ರಸರಣ ನಿಗಮ ನಿಯಮಿತದಿಂದ 14-10-2024 ರಂದು 2,542 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮಾನ್ ಹುದ್ದೆಗಳ ನೇಮಕಾತಿ ಅಧಿಸೂಚಿಸಿ ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು 20.11.2024 ಮತ್ತು ಅರ್ಜಿ ಶುಲ್ಕ ಪಾವತಿಸಲು 25.11.2024 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು.
ಆನ್-ಲೈನ್ ಅರ್ಜಿಗೆ ಸಂಬಂಧಿಸಿದಂತೆ Server / Technical Problem ನಿಂದಾಗಿ ಚಲನ್ ಡೌನ್‌ಲೋಡ್ ಮಾಡಲು, Payment ಮಾಡಲು ಹಾಗೂ E-sign ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಅಭ್ಯರ್ಥಿಗಳಿಗೆ ಮಾತ್ರ E-sign ಪ್ರಕ್ರಿಯೆ Post office chalan ಡೌನ್‌ಲೋಡ್ ಮಾಡಲು ಮತ್ತು ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಆದರೆ ಹೊಸದಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಅರ್ಜಿ ಸಲ್ಲಿಕೆಯ ಮೊದಲೆರಡು ಹಂತಗಳನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳಿಗೆ ಸೀಮಿತವಾಗಿ, e-sign ಪ್ರಕ್ರಿಯೆ, ಅಂಚೆ ಕಚೇರಿ ಚಲನ್ ಡೌನ್ಲೋಡ್ ಮತ್ತು ಅರ್ಜಿ ಶುಲ್ಕ ಪಾವತಿ ದಿನಾಂಕಗಳನ್ನು ಕ್ರಮವಾಗಿ ದಿನಾಂಕ 05.ನವೆಂಬರ್.2024 ಹಾಗೂ 10.ನವೆಂಬರ್ 2024 ರವರೆಗೆ ವಿಸ್ತರಿಸಲಾಗಿತ್ತು.
ಇದುವರೆಗೆ ಹಲವಾರು ಅಭ್ಯರ್ಥಿಗಳು ಕಾರಣಾಂತರಗಳಿಂದ e-sign ಪ್ರಕ್ರಿಯೆ, ಅಂಚೆ ಕಚೇರಿ ಚಲನ್ ಡೌನ್‌ಲೋಡ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಾಗದೇ ಇರುವ ಕಾರಣ, ಅಭ್ಯರ್ಥಿಗಳಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಹೆಚ್ಚಿನ ಸಮಯವನ್ನು ನೀಡಲಾಗಿದೆ. ಇದೀಗ ಚಲನ್ ಡೌನ್ಲೋಡ್ ಮತ್ತು ಶುಲ್ಕ ಪಾವತಿಸುವ ದಿನಾಂಕವನ್ನು ಈ ಕೆಳಗಿನಂತೆ ವಿಸ್ತರಿಸಲಾಗಿದೆ.
- e-sign ಪ್ರಕ್ರಿಯೆ, ಅಂಚೆ ಕಚೇರಿ ಚಲನ್ ಡೌನ್ಲೋಡ್ ಮಾಡುವ ಕೊನೆಯ ದಿನಾಂಕ : 13 ಡಿಸೆಂಬರ್ 2024
- ಅರ್ಜಿ ಕಚೇರಿಯ ಮೂಲಕ ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ :18 ಡಿಸೆಂಬರ್ 2024
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
Comments