ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹೊರಡಿಸಲಾದ ವಿವಿಧ ಹುದ್ದೆಗಳ ಅಧಿಸೂಚನೆ ರದ್ದು
Published by: Basavaraj Halli | Date:23 ನವೆಂಬರ್ 2020

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ದಿನಾಂಕ್ 25 ಫೆಬ್ರುವರಿ 2019 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಎಸ್ಕಾಂ ಗಳಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್, ಕಿರಿಯ ಆಪ್ತ ಸಹಾಯಕ ಮತ್ತು ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು.
ಈ ನೇಮಕಾತಿ ಅಧಿಸೂಚನೆಯಲ್ಲಿ ಕ.ವಿ.ಪ್ರ.ನಿ.ನಿ ಹಾಗೂ ಹೆಸ್ಕಾಂ ಗಳಲ್ಲಿನ ಒಟ್ಟು 1559 ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲು ನಿರ್ಧರಿಸಲಾಗಿತ್ತು, ಆದರೆ ಪ್ರಸ್ತುತ ಈ ನೇರ ನೇಮಕಾತಿಯನ್ನು ಆಡಳಿತಾತ್ಮಕ ಕಾರಣಗಳಿಂದ ತತ್ ಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ನಿಗಮವು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಣೆಯನ್ನು ಹೊರಡಿಸಿದೆ.
ಈ ಕುರಿತ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಓದಿಕೊಳ್ಳಬಹುದು.

Comments