KREIS Admission 2026: 6ನೇ ತರಗತಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಕೀ-ಉತ್ತರ ಪ್ರಕಟ, ಆಕ್ಷೇಪಣೆ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ
Published by: Yallamma G | Date:5 ಮಾರ್ಚ್ 2026

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಸೇರಿದಂತೆ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಯ ಕೀ-ಉತ್ತರಗಳನ್ನು ಪ್ರಕಟಿಸಿದೆ. ಕೀ-ಉತ್ತರ ಪಿಡಿಎಫ್ ಡೌನ್‌ಲೋಡ್ ಮಾಡಲು ಹಾಗೂ ಆಕ್ಷೇಪಣೆ ಸಲ್ಲಿಸುವ ಸಂಪೂರ್ಣ ಮಾಹಿತಿಗಾಗಿ ಈ ಲೇಖನ ಓದಿ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಯ ಕೀ-ಉತ್ತರಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಕುರಿತಾದ ಪ್ರಕಟಣೆಯನ್ನು ದಿನಾಂಕ 03.03.2026 ರಂದು ಹೊರಡಿಸಲಾಗಿದೆ.
6ನೇ ತರಗತಿ ಪ್ರವೇಶ ಪರೀಕ್ಷೆಯ ಕೀ-ಉತ್ತರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಿದ್ದ 2.31 ಲಕ್ಷ ಮಂದಿ ಪೈಕಿ ಶೇ.98 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯದ 800ಕ್ಕೂ ಅಧಿಕ ವಸತಿ ಶಾಲೆಗಳಲ್ಲಿ 22 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಈ ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿ ಮಾಡಿಕೊಳ್ಳಲಾಗುತ್ತದೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಮೂಲಕ ಕೀ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದು. ಒಂದು ವೇಳೆ ಪ್ರಕಟಿತ ಕೀ ಉತ್ತರಗಳಲ್ಲಿ ಯಾವುದೇ ಲೋಪಗಳಿದ್ದಲ್ಲಿ ಅಥವಾ ಉತ್ತರಗಳು ತಪ್ಪಾಗಿವೆ ಎಂದು ಕಂಡುಬಂದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ಪ್ರಾಧಿಕಾರ ಅವಕಾಶ ಕಲ್ಪಿಸಿದೆ.
ಆಕ್ಷೇಪಣೆ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
ಪ್ರವೇಶ ಪರೀಕ್ಷೆ ನಡೆದ ಪ್ರಮುಖ ವಸತಿ ಶಾಲೆಗಳು ಯಾವುವು?
ಈ ಕೆಳಕಂಡ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ:
ಆಕ್ಷೇಪಣೆ ಸಲ್ಲಿಕೆಗೆ ಪ್ರಮುಖ ದಿನಾಂಕಗಳು ಮತ್ತು ಸಮಯ
ಆಕ್ಷೇಪಣೆಗಳನ್ನು ಸಲ್ಲಿಸುವಾಗ ಅಭ್ಯರ್ಥಿಗಳು ಈ ಕೆಳಗಿನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು:
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಹೊಸ ನೇಮಕಾತಿಗಳಿಗಾಗಿ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಸಿಸಲು ಇಲ್ಲಿ ಡೌನ್ಲೋಡ್ ಮಾಡಿ.

- ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು.
- ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು.
- ಏಕಲವ್ಯ ಮಾದರಿ ವಸತಿ ಶಾಲೆಗಳು.
- ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳು.
- ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳು.
- ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳು.
- ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆಗಳು.
- ಸಂಗೊಳ್ಳಿ ರಾಯಣ್ಣ ವಸತಿ ಶಾಲೆಗಳು.
- ಕವಿ ರನ್ನ ವಸತಿ ಶಾಲೆಗಳು.
- ಗಾಂಧಿ ತತ್ವ ವಸತಿ ಶಾಲೆಗಳು.
- ಶ್ರೀ ನಾರಾಯಣ ಗುರು ವಸತಿ ಶಾಲೆಗಳು ಮುಂತಾದವು.
ಆಕ್ಷೇಪಣೆ ಸಲ್ಲಿಕೆಗೆ ಪ್ರಮುಖ ದಿನಾಂಕಗಳು ಮತ್ತು ಸಮಯ
- ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ: 07 ಮಾರ್ಚ್ 2026.
- ಕೊನೆಯ ಸಮಯ: ಮಧ್ಯಾಹ್ನ 12:00 ಗಂಟೆಯೊಳಗೆ.
ಆಕ್ಷೇಪಣೆಗಳನ್ನು ಸಲ್ಲಿಸುವಾಗ ಅಭ್ಯರ್ಥಿಗಳು ಈ ಕೆಳಗಿನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು:
- ಸಲ್ಲಿಸುವ ವಿಧಾನ: ಕೇವಲ ಆನ್‌ಲೈನ್ ಮೂಲಕ ಮಾತ್ರ ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/ ನಲ್ಲಿ ಒದಗಿಸಲಾದ ಲಿಂಕ್ ಬಳಸಿ ಸಲ್ಲಿಸಬೇಕು.
- ಕಡ್ಡಾಯ ಮಾಹಿತಿಗಳು: ಆಕ್ಷೇಪಣೆ ಸಲ್ಲಿಸುವ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್ (Version Code) ಮತ್ತು ಪ್ರಶ್ನೆ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.
- ಪೂರಕ ದಾಖಲೆ (Proof): ನಿಮ್ಮ ಆಕ್ಷೇಪಣೆಯನ್ನು ದೃಢೀಕರಿಸುವ ಅಧಿಕೃತ ಪೂರಕ ದಾಖಲೆಗಳನ್ನು (Textbook references/Proof) ಕಡ್ಡಾಯವಾಗಿ PDF ರೂಪದಲ್ಲಿ ಅಪ್‌ಲೋಡ್ ಮಾಡಬೇಕು.
ಗಮನಿಸಿ: ನಿಗದಿತ ಅವಧಿಯೊಳಗೆ ಈ ಮೇಲ್ಕಂಡ ಮಾಹಿತಿಗಳನ್ನು ಮತ್ತು ದಾಖಲೆಗಳನ್ನು ಒದಗಿಸದಿದ್ದರೆ ಅಂತಹ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಆಕ್ಷೇಪಣೆಗಳ ಸಲ್ಲಿಕೆಯ ನಂತರ ವಿಷಯ ತಜ್ಞರ ಸಮಿತಿಯು ಅದನ್ನು ಪರಿಶೀಲಿಸಿ ನೀಡುವ ಅಂತಿಮ ಕೀ ಉತ್ತರಗಳೇ ಅಂತಿಮ ನಿರ್ಧಾರವಾಗಿರುತ್ತವೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
- ವಿಳಾಸ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, 18ನೇ ಅಡ್ಡ ರಸ್ತೆ, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಬೆಂಗಳೂರು - 560012.
- ಸಹಾಯವಾಣಿ: 080-23 460 460.
- ಇ-ಮೇಲ್: keauthority-ka@nic.in.
ಹೊಸ ನೇಮಕಾತಿಗಳಿಗಾಗಿ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಸಿಸಲು ಇಲ್ಲಿ ಡೌನ್ಲೋಡ್ ಮಾಡಿ.

Comments