Karnataka State Police 06 ನವೆಂಬರ್ 2024 1 year ago
Published by Yallamma G

ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳ ಪರೀಕ್ಷಯ ಫಲಿತಾಂಶ ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳ ಪರೀಕ್ಷಯ ಫಲಿತಾಂಶ ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ನೇಮಕಾತಿಗಾಗಿ 2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.

      ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 2024 ಅಕ್ಟೋಬರ್ 03 ರಂದು ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಇದೀಗ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದೆ. 

       ಈ ಅಂಕಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಲಿಂಕ್ ಮೂಲಕ ದಿನಾಂಕ: 09.11.2024ರ ಸಂಜೆ 5.30 ರೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಬೇರೆ ಯಾವುದೇ ಇತರೆ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ.

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.