Loading..!

ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil PSI ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:10 ಸೆಪ್ಟೆಂಬರ್ 2025
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) (ಪುರುಷ ಮತ್ತು ಮಹಿಳಾ)ಹುದ್ದೆಗಳ ನೇಮಕಾತಿಗಾಗಿ 03/03/2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು.


                ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 2024 ಅಕ್ಟೋಬರ್ 03 ರಂದು ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಮತ್ತು 11/04/2024 ರಂದು ಅಂತಿಮ ಅಂಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ನೇಮಕಾತಿ ಮುಂದುವರಿದ ಹಂತವಾದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸರ್ಕಾರ ಪಾತ್ರದಲ್ಲಿ ನಿರ್ದೇಶಿಸಿರುವಂತೆ 381 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ, ಉಲ್ಲೇಖ(7)ರನ್ವಯ ದಿನಾಂಕ: 26.12.2024 ರಂದು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿರುತ್ತದೆ.


          ಸದರಿ ಹುದ್ದೆಗಳ ನೇಮಕಾತಿ ಸಲುವಾಗಿ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಡ್ಯತೆ ಪರೀಕ್ಷೆಗಳನ್ನು ನಡೆಸಿದ ನಂತರ ಸದರಿ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಬೇಕಾಗಿದ್ದು, ಈ ಸಂಬಂಧ ಉಲ್ಲೇಖ(2)ರ ಸರ್ಕಾರದ ಆದೇಶದನ್ವಯ ಸದರಿ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಉಲ್ಲೇಖ(3)ರಂತೆ ದಿನಾಂಕ: 03.10.2024ರಂದು ನಡೆಸಿ, ಉಲ್ಲೇಖ(4)ರನ್ವಯ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ.


                     ಆದ್ದರಿಂದ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಪಿ.ಎಸ್.ಐ. (ಸಿವಿಲ್) 402 ಹುದ್ದೆಗಳಿಗೆ ಸಂಬಂಧಿಸಿದಂತೆ ಕಾಯ್ದಿರಿಸಲಾಗಿರುವ 21 (ಕಲ್ಯಾಣ ಕರ್ನಾಟಕ) ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಿ, ತಿದ್ದುಪಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯ ಪ್ರಕ್ರಿಯೆಯನ್ನು ನಡೆಸಿ ಉಲ್ಲೇಖ(12)ರ ಸರ್ಕಾರದ ಪತ್ರದಲ್ಲಿ ನಿರ್ದೇಶಿಸಿರುವ ಷರತ್ತುಗಳಿಗೊಳಪಟ್ಟು ಕ್ರಮಕೈಗೊಳ್ಳುವ ಕುರಿತು, ಸರ್ಕಾರದಿಂದ ಮುಂದಿನ ನಿರ್ದೇಶನವನ್ನು ಹಾಗೂ ಅನುಮತಿಯನ್ನು ಕೋರಲಾಗಿರುತ್ತದೆ.


ನೇಮಕಾತಿ ಪ್ರಕ್ರಿಯೆಯ ಹಂತಗಳು : 
- ಪ್ರಾರಂಭದಲ್ಲಿ ಸಹಿಷ್ಣುತೆ ಮತ್ತು ದೇಹದಾರ್ಡ್ಯ ಪರೀಕ್ಷೆಗಳನ್ನು ನಡೆಸಲಾಗಿತ್ತು.
- ನಂತರ ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ (03.10.2024) ನಡೆಸಿ ಅಂಕಪಟ್ಟಿ ಪ್ರಕಟಿಸಲಾಯಿತು.
- ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿಸಲಾಯಿತು.
- ತಾತ್ಕಾಲಿಕ ಪಟ್ಟಿಯ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸಲಾಯಿತು.
- ಎಲ್ಲಾ ಹಂತಗಳನ್ನು ಪೂರ್ಣಗೊಳಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.


ಸರ್ಕಾರದ ನಿರ್ದೇಶನಗಳು
- ಆಯ್ಕೆ ಪಟ್ಟಿಯು ರಿಟ್ ಪಿಟಿಷನ್ ಸಂ:16343/2024 ಸೇರಿದಂತೆ ಉನ್ನತ ನ್ಯಾಯಾಲಯಗಳ ತೀರ್ಪಿಗೆ ಒಳಪಟ್ಟಿರುತ್ತದೆ.
- ವೃಂದ ಬದಲಾವಣೆ, ಮೀಸಲಾತಿ ಪ್ರವರ್ಗ ಬದಲಾವಣೆ ಹಾಗೂ ಘಟಕವಾರು ಬದಲಾವಣೆಗಳು ಸಂಭವಿಸಬಹುದಾದ್ದರಿಂದ, ಅವುಗಳನ್ನು ನಿಯಮಾನುಸಾರ ಪರಿಗಣಿಸಲಾಗುವುದು.
- ಅಂತಿಮ ಪಟ್ಟಿಯ ಆಧಾರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳು ನೀಡಲಾಗಲಿದ್ದು, ಬಳಿಕ ವೃತ್ತಿ ಬುನಾದಿ ತರಬೇತಿ ಆರಂಭಗೊಳ್ಳಲಿದೆ.


ಅಂತಿಮ ಹುದ್ದೆಗಳ ಸಂಖ್ಯೆ
ಒಟ್ಟು 402 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಗೆ ಅರ್ಹರಾದ 402 ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಇದರೊಳಗೆ ಕಲ್ಯಾಣ ಕರ್ನಾಟಕ ವೃಂದಕ್ಕೆ ಕಾಯ್ದಿರಿಸಲಾದ ಹುದ್ದೆಗಳನ್ನೂ ಪರಿಗಣಿಸಲಾಗಿದೆ.


ಮುಖ್ಯ ಸೂಚನೆಗಳು
- ಅಂತಿಮ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ವಾರ್ಷಿಕ ಕಾರ್ಯದಕ್ಷತಾ ವರದಿ ಮತ್ತು ಬಾಕಿ ಉಳಿದಿರುವ ಯಾವುದೇ ಇಲಾಖೆ ತನಿಖೆಗಳ ಪರಿಶೀಲನೆಗೆ ಒಳಪಟ್ಟಿರುತ್ತದೆ.
- ಆಯ್ಕೆಪಟ್ಟಿಯು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯಗಳ ಅಂತಿಮ ತೀರ್ಪುಗಳಿಗೆ ಒಳಪಟ್ಟಿರುತ್ತದೆ.


👉 ಅಂತಿಮ ಆಯ್ಕೆಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ.

Comments