ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 3064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ನಿಗದಿ
Published by: Yallamma G | Date:21 ಡಿಸೆಂಬರ್ 2023

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 12 ಸೆಪ್ಟೆಂಬರ್ 2022 ರಂದು ಅಧಿಸೂಚಿಸಲಾದ3064 NKK ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿಯ ಮೊದಲನೇ ಹಂತವಾಗಿ ಸ್ಪರ್ಧಾತ್ಮಕ ಪರೀಕ್ಷೆನ್ನು ನಡೆಸಲು ಪರೀಕ್ಷಾ ದಿನಾಂಕವನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪ್ರಕಟಿಸಿದೆ, ಪರೀಕ್ಷೆಯು ದಿನಾಂಕ 28 ಜನೆವರಿ 2024 ರಂದು ನಡೆಸಲು ನಿರ್ಧರಿಸಲಾಗಿದೆ. ಎಲ್ಲ ಸಿದ್ಧತೆಗಳು ನಿಯೋಜನೆಯಂತೆ ಆದಲ್ಲಿ ಈ ದಿನಾಂಕವೇ ಅಂತಿಮವಾಗಲಿದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Comments