ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ ಮತ್ತು ಸಶಸ್ತ್ರ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ
Published by: Basavaraj Halli | Date:21 ಫೆಬ್ರುವರಿ 2020

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 10 ಜೂನ್ 2019 ರಂದು ಅಧಿಸೂಚಿಸಿದ ಒಟ್ಟು 163 ನಾಗರೀಕ(Civil) ಮತ್ತು 159 ಸಶಸ್ತ್ರ (CAR/DAR) ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಲಿಖಿತ ಪರೀಕ್ಷೆ ನಡೆಸಲಾಗಿದ್ದು, ಈ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ದೈಹಿಕ ಪರೀಕ್ಷೆಗಾಗಿ ಪೊಲೀಸ್ ಇಲಾಖೆಯು ಪ್ರವೇಶ ಪತ್ರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಮೊದಲ ಹಂತವಾಗಿ ಬೀದರ್, ಕಲಬುರಗಿ, ಬೆಂಗಳೂರು, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಕಡ್ಡಾಯವಾಗಿ ದೈಹಿಕ ಪರೀಕ್ಷೆಗೆ ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.





Comments