Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Civil PC 1,137 ಹುದ್ದೆಗಳ ಲಿಖಿತ ಪರೀಕ್ಷಯ ತಾತ್ಕಾಲಿಕ ಸರಿ ಉತ್ತರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Bhagya R K | Date:2 ಮಾರ್ಚ್ 2024
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 1,137 ಸಿವಿಲ್ (ನಾಗರೀಕ) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 2022 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಪ್ರಸ್ತುತ ಈ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ದಿನಾಂಕ 25- ಫೆಬ್ರುವರಿ -2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಕಟಿಸಿದೆ. 
ಪ್ರಕಟಿಸಲಾದ ತಾತ್ಕಾಲಿಕ ಸರಿ ಉತ್ತರಗಳಿಗೆ ಏನಾದರು ಆಕ್ಷೇಪಣೆ ಗಳಿದ್ದಲ್ಲಿ 10-ಮಾರ್ಚ್-2024 ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ  ತಾತ್ಕಾಲಿಕ ಸರಿ ಉತ್ತರವನ್ನು ಡೌನ್ ಲೋಡ್ (Download) ಮಾಡಿಕೊಳ್ಳಬಹುದಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ  ತಾತ್ಕಾಲಿಕ ಸರಿ ಉತ್ತರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Comments

User ಮಾರ್ಚ್ 2, 2024, 1:10 ಅಪರಾಹ್ನ