ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ
Author: Basavaraj Halli | Date:30 ನವೆಂಬರ್ 2019

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ ನವೆಂಬರ್ 17, 2019 ರಂದು ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿತ್ತು, ಪ್ರಸ್ತುತ ಈ ಲಿಖಿತ ಪರಿಚಯ ಅಧಿಕೃತ ಕೀ ಉತ್ತರಗಳು ಇಲಾಖೆಯ ಜಾಲತಾಣದಲ್ಲಿ ಪ್ರಕಟವಾಗಿದ್ದು. ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖಾ ಜಾಲತಾಣದಿಂದ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಉತ್ತರ ಪತ್ರಿಕೆಯೊಂದಿಗೆ ಪರಿಶೀಲಿಸಬಹುದಾಗಿದೆ.
ಅಭ್ಯರ್ಥಿಗಳಿಗೆ ಕೀ ಉತ್ತರಗಳಲ್ಲಿ ಏನಾದರೂ ತಪ್ಪುಗಳು ಕಂಡು ಬಂದಲ್ಲಿ ಆಕ್ಷೇಪಣೆ ಸಲ್ಲಿಸಲು ದಿನಾಂಕ 04-12-2019 ರವರೆಗೆ ಅಭ್ಯರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ.
ಈ ಕೆಳಗೆ ನೀಡಿರುವ ಇಂಕಿನ ಮೂಲಕ ಅಭ್ಯರ್ಥಿಗಳು ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.