Loading..!

ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಕಾನ್ ಸ್ಟೆಬಲ್ ಹುದ್ದೆಗಳ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ
Published by: Siddaram Halli | Date:17 ಫೆಬ್ರುವರಿ 2020
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 10 ಜೂನ್ 2019 ರಂದು ಅಧಿಸೂಚಿಸಿದ ಒಟ್ಟು 163 ಪೊಲೀಸ್ ಕಾನ್ ಸ್ಟೆಬಲ್ (ನಾಗರಿಕ) ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಲಿಖಿತ ಪರೀಕ್ಷೆ ನಡೆಸಲಾಗಿದ್ದು, ಈ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ದೈಹಿಕ ಪರೀಕ್ಷೆಗಾಗಿ ಪೊಲೀಸ್ ಇಲಾಖೆಯು ಪ್ರವೇಶ ಪತ್ರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಮೊದಲ ಹಂತವಾಗಿ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಕಡ್ಡಾಯವಾಗಿ ದೈಹಿಕ ಪರೀಕ್ಷೆಗೆ ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Comments