Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ PC 454 ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆಪಟ್ಟಿ ಇದೀಗ ಪ್ರಕಟ
Published by: Yallamma G | Date:13 ಮಾರ್ಚ್ 2024
not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಿದ ಕಲ್ಯಾಣ ಕರ್ನಾಟಕದ 454 ಸಿವಿಲ್ (ನಾಗರೀಕ) ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ 2022-2023 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ನೇಮಕಾತಿಯ ಮೊದಲ ಹಂತವಾದ ಲಿಖಿತ ಪರೀಕ್ಷೆಯನ್ನು 10 ಡಿಸೆಂಬರ್ 2023 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು, ಸದರಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ KSP ಇಲಾಖೆಯು ತಾತ್ಕಾಲಿಕ ಆಯ್ಕೆಪಟ್ಟಿ (Provisional Select List) ಯನ್ನು ಪ್ರಕಟಿಸಿದೆ. ಬಳ್ಳಾರಿ, ಬೀದರ್, ಯಾದಗಿರಿ, ಕಲಬುರಗಿ, ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಬೆಂಗಳೂರು City ಸೇರಿದಂತೆ ವಿವಿಧ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಜಿಲ್ಲೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು KSP ಇಲಾಖೆ ಇದೀಗ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿತಾತ್ಕಾಲಿಕ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ. 
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments