ಕರ್ನಾಟಕ ರಾಜ್ಯ PSI ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ 5 ನೇ ಬಾರಿ ಇದೀಗ ಮತ್ತೆ ವಿಸ್ತರಣೆ
Published by: Basavaraj Halli | Date:15 ಜೂನ್ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪ್ರಸ್ತುತ ರಾಜ್ಯದಲ್ಲಿ ಲಾಕ್ ಡೌನ್ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಆಡಳಿತಾತ್ಮಕ ಕಾರಣಗಳಿಂದ ಹಾಗೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳ ನೇಮಕಾತಿಯ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 12-06-2021 ರ ಬದಲು 07-07-2021 ರವರೆಗೆ ಮತ್ತು ಶುಲ್ಕವನ್ನು ಪಾವತಿಸುವ ದಿನಾಂಕವನ್ನು 24-06-2021 ರಿಂದ 09-07-2021 ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆಯು ಪ್ರಕಟಿಸಿದ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.





Comments