ಕರ್ನಾಟಕ ರಾಜ್ಯ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Published by: Basavaraj Halli | Date:1 ಮೇ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ ಸಿವಿಲ್ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವು ಈ ಮೊದಲು 3 ಮೇ 2021 ಆಗಿತ್ತು, ಪ್ರಸ್ತುತ ರಾಜ್ಯದಲ್ಲಿ ವಿಧಿಸಿರುವ ಲಾಕ್ ಡೌನ್ ಹಿನ್ನೆಲೆ ಅಭ್ಯರ್ಥಿಗಳಿಗೆ ತೊಂದರೆಯಾಗಬಾರದೆಂದು ಅರ್ಜಿ ಸಲ್ಲಿಕೆ ದಿನಾಂಕವನ್ನು ಪರಿಷ್ಕರಿಸಿ 20 ಮೇ 2021ರವರೆಗೆ ವಿಸ್ತರಿಸಲಾಗಿದೆ ಹಾಗೂ ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು 24 ಮೇ 2021ರವರೆಗೆ ವಿಸ್ತರಿಸಿ ಅಧಿಕೃತ ಜಾಲತಾಣದಲ್ಲಿ ಪ್ರಕಟನೆಯನ್ನು ಹೊರಡಿಸಲಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣದಲ್ಲಿ ನೀಡಿರುವ ಪ್ರಕಟಣೆಯನ್ನು ಓದಿಕೊಂಡು ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

Comments