ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
Published by: Basavaraj Halli | Date:6 ಅಕ್ಟೋಬರ್ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇದೇ ದಿನಾಂಕ 3 ಅಕ್ಟೋಬರ್ 2021 ರಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇದೀಗ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ತಾತ್ಕಾಲಿಕ ಕೀ ಉತ್ತರ ಗಳನ್ನು ಡೌನ್ ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ, ಹಾಗೂ ಏನಾದರೂ ತಪ್ಪುಗಳು ಕಂಡುಬಂದಲ್ಲಿ ನಿಗದಿಪಡಿಸಿದ ದಿನಾಂಕದೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ
ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ : 13 ಅಕ್ಟೋಬರ್ 2021
ಅರ್ಜಿ ಸಲ್ಲಿಸಬೇಕಾದ ವಿಳಾಸ : Additional Director General of Police, Recruitment, Carlton house, palace road, Bangalore 560001

Comments