ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಬಿಡುಗಡೆ
Published by: Sanju Shirol | Date:26 ಫೆಬ್ರುವರಿ 2021

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿಯಿರುವ ಒಟ್ಟು 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 22 ಜೂನ್ 2020ರಂದು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಪ್ರಸ್ತುತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಮತ್ತು ಸಹಿಷ್ಣುತಾ ಪರೀಕ್ಷೆಗಳಿಗೆ ಪ್ರವೇಶ ಪತ್ರಗಳುನ್ನು ಇಲಾಖಾ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಇದೀಗ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

Comments