Loading..!

ಪೊಲೀಸ್ ಇಲಾಖೆಯಲ್ಲಿನ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿರುವ ಕುರಿತು
Published by: Siddaram Halli | Date:14 ಮೇ 2020
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 2019-20 ಮತ್ತು 2020-21 ನೇ ಸಾಲಿನಲ್ಲಿ ಒಟ್ಟು 6686 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಅರ್ಜಿ ಪ್ರಕ್ರಿಯೆ ಆರಂಭಿಸುವದಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು.

ಈ ನೇಮಕಾತಿಯಲ್ಲಿ ನಾಗರಿಕ ಹಾಗೂ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 20 ಮೇ 2020 ರಿಂದ ಹಾಗೂ ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಮತ್ತು ವಿಶೇಷ ಮೀಸಲು ಪೊಲೀಸ್ ಕಾನ್ ಸ್ಟೇಬಲ್ (ಬ್ಯಾಂಡ್ಸ್ ಮ್ಯಾನ್) ಹುದ್ದೆಗಳ ನೇರ ನೇಮಕಾತಿಗಾಗಿ ದಿನಾಂಕ 18 ಮೇ 2020 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಬೇಕಿತ್ತು, ಆದರೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿದಿರುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗುವುದು ಮನಗಂಡು ಪೊಲೀಸ್ ಇಲಾಖೆಯು ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಯ ದಿನಾಂಕವನ್ನು ತಾತ್ಕಾಲಿಕವಾಗಿ ಮುಂದೂಡಿದೆ.

Comments

Manju Banigar ಮೇ 20, 2020, 6:12 ಪೂರ್ವಾಹ್ನ