Karnataka State Police 15 ಮಾರ್ಚ್ 2020 6 years ago
Published by Basavaraj Halli

ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಮೀಸಲು ಪಡೆ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ನಿಯಮ ಬದಲಾವಣೆ

ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಮೀಸಲು ಪಡೆ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ನಿಯಮ ಬದಲಾವಣೆ
ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಮೀಸಲು ಪಡೆ (KSRP, CAR/DAR, IRB) ಯ ಪೊಲೀಸ್ ಕಾನ್ಸ್‌ಸ್ಟೇಬಲ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲ ಬದಲಾವಣೆಗಳನ್ನೂ ಮಾಡಿ ರಾಜ್ಯ ಮೀಸಲು ಪೊಲೀಸ್‌ (ವೃಂದ ಮತ್ತು ನೇಮಕಾತಿ) ನಿಯಮ-2020 ಎಂಬ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಮೊದಲು ಮೀಸಲು ಪಡೆ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಡ್ಯ ಪರೀಕ್ಷೆ ನಡೆಸಿದ ಬಳಿಕ ಅರ್ಹತೆ ಪಡೆದವರಿಗೆ ಲಿಖೀತ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಿ, ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ 1:5 ರ ಅನುಪಾತದಲ್ಲಿ ಸಹಿಷ್ಣುತೆ & ದೇಹದಾಢ್ಯತೆ ಪರೀಕ್ಷೆಗೆ ಆಹ್ವಾನಿಸಲಾಗುತ್ತಿದೆ. ಈ ಬದಲಾವಣೆ ಉದ್ದೇಶದಿಂದ ಜಾರಿಗೆ ತರಲಾದ 'ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ನಿಯಮ - 2020' ಎಂಬ ಕರಡು ಅಧಿಸೂಚನೆ ಪ್ರಕಟಿಸಲಾಗಿದ್ದು ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದೆ. ಅನಂತರವಷ್ಟೇ ಅಧಿಕೃತವಾಗಿ ಪ್ರಕ್ರಿಯೆ ಜಾರಿಗೆ ಬರಲಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

I As ಮಾರ್ಚ್ 17, 2020, 9:29 ಪೂರ್ವಾಹ್ನ