ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿನ 13,000 ಕ್ಕೂ ಅಧಿಕ ಚಾಲಕರು ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by: Yallamma G | Date:27 ಅಕ್ಟೋಬರ್ 2023

ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿನ ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ 13,000 ಕ್ಕೂ ಅಧಿಕ ಚಾಲಕರು, ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. 2016 ರಲ್ಲಿ ಸಾರಿಗೆ ಚಾಲಕ ಮತ್ತು ನಿರ್ವಾಹಕರ ನೇಮಕಾತಿ ಮಾಡಿಕೊಳ್ಳಲಾಗಿತ್ತು ನಂತರ 7 ವರ್ಷಗಳಿಂದ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ, ಅದರಿಂದಾಗಿ ಹೊಸ ನೇಮಕ ಮಾಡಿಕೊಳ್ಳುವ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವರಾದ ಸೋಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
* ಈ ಕುರಿತು ಮಾನ್ಯ ಮುಖ್ಯಮಂತ್ರಿ ಅವರು ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.

Comments